ವಿಜಯಪುರ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವಾಗಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ವಿನಯ ಕುಲಕರ್ಣಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸತ್ಯ ಏನು ಎಂಬುವುದು ಜನರಿಗೆ ಗೊತ್ತಾಗಲಿದೆ. ವಿನಯ ಅವರು ಸಮಸ್ಯೆಯನ್ನು ಸಮರ್ಥವಾಗಿ ಎದುರಿಸುತ್ತಾರೆ. ನಿರಪರಾಧಿಯಾಗಿ ಹೊರ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸರು.
ಕೇಂದ್ರ ಸರ್ಕಾರ ಸರ್ಕಾರ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂತಲೂ ವಾಗ್ದಾಳಿ ನಡೆಸಿದ ಅವರಿ, ದ್ವೇಷದ ರಾಜಕಾರಣವನ್ನು ಪ್ರತಿಯೊಬ್ಬರು ಖಂಡಿಸಬೇಕು ಎಂದಿದ್ದಾರೆ.
Laxmi News 24×7