Breaking News

ಬಸನಗೌಡ ತುರವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆ- ರಂಗೇರಿದ ಮಸ್ಕಿ ಉಪಚುನಾವಣಾ ಕಣ

Spread the love

ರಾಯಚೂರು: ಮಸ್ಕಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಅಘೋಷಿತ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಕ್ಷಾಂತರದಿಂದ ತೆರವಾಗಿರುವ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ರಾಜಕೀಯ ಚುರುಕುಗೊಂಡಿದೆ. ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಪೈಪೋಟಿಯ ವಾತಾವರಣ ನಿರ್ಮಾಣವಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಕೇವಲ 213 ಮತಗಳ ಅಂತರದಿಂದ ಪರಾಭವಗೊಂಡಿದ್ದ ಬಸನಗೌಡ ತುರವಿಹಾಳ ಈಗ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಪ್ರತಾಪ್ ಗೌಡ ವಿರುದ್ಧ ಅಕ್ರಮ ಮತದಾನದ ಪ್ರಕರಣ ದಾಖಲಿಸಿದ್ದ ಬಸನಗೌಡರನ್ನು ಬಿಜೆಪಿ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣವನ್ನು ವಜಾಗೊಳಿಸಿದೆ. ಹೀಗಾಗಿ ಚುನಾವಣಾ ಕಣ ರಂಗೇರಿದೆ.


Spread the love

About Laxminews 24x7

Check Also

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Spread the loveರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ