Breaking News

ಸಿಬಿಐ ತನಿಖೆಯಿಂದ ಕಾಂಗ್ರೆಸ್ ನ್ನು ಹೆದರಿಸಲು ಸಾಧ್ಯವಿಲ್ಲ: ರಣದೀಪ್

Spread the love

ಬೆಂಗಳೂರು, ನ.7- ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ವಿನಯ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತ ಪಡಿಸಿದರು.

ಈ ಕುರಿತು ಟ್ವಿಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ. ಅಸ್ಥಿರ ಯಡಿಯೂರಪ್ಪ ಸರ್ಕಾರವು ತನ್ನ ಮುಂಚೂಣಿ ಘಟಕಗಳಾದ ಸಿಬಿಐ, ಇಡಿಯನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್, ಪರಮೇಶ್ವರ್, ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರನ್ನು ಹಣಿಯಲು ಯತ್ನಿಸುತ್ತಿದೆ.

ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು ಎಂದು ತಿರುಗೇಟು ನೀಡಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ