ಶಿವಮೊಗ್ಗ: ಶಿರಾ ಹಾಗೂ ಆರ್‍ಆರ್‍ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಪ್ರಚಾರದ ವೇಳೆಯಲ್ಲಿಯೇ ಹೇಳಿದ್ದೆ, ಎರಡು ಕ್ಷೇತ್ರದಲ್ಲಿ ನಮ್ಮ ಪಕ್ಷ ಗೆಲುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಸಹ ಹೇಳಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಚಾರದ ವೇಳೆ ಕಾಂಗ್ರೆಸ್ ನವರು ನಮ್ಮ ಪಕ್ಷದ ಬಗ್ಗೆ ವಿನಾಃ ಕಾರಣ ಟೀಕೆ ಮಾಡುತ್ತಿದ್ದರು. ಶಿರಾದಲ್ಲಿ ಬಿಜೆಪಿ ಠೇವಣಿ ಉಳಿಸಿಕೊಳ್ಳದಿರುವ ಕ್ಷೇತ್ರ. ಆದರೆ ಈ ಬಾರಿ ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ 25 ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ ಎಂದರು.
ಆರ್ ಆರ್ ನಗರದಲ್ಲಿ ಸಹ 40 ಸಾವಿರ ಅಂತರದಲ್ಲಿ ಗೆಲ್ಲುತ್ತೇವೆ. ಬಿಹಾರದಲ್ಲಿಯೂ ಸಹ ನಿತೀಶ್ ಕುಮಾರ್ ಸರಕಾರ ಬರುತ್ತೆ ಎಂಬ ವಿಶ್ವಾಸವಿದೆ ನೋಡೋಣ ಎಂದು ಸಿಎಂ ಬಿಎಸ್ ವೈ ತಿಳಿಸಿದರು.
Laxmi News 24×7