Breaking News

ನಾನು 100 ಟ್ಯಾಬ್ ನೀಡ್ತೀನಿ, ಸಾಧ್ಯವಾದ್ರೆ ನೀವೂ ಟ್ಯಾಬ್ ನೀಡಿ- ಶಿವಣ್ಣ ಮನವಿ

Spread the love

ಬೆಂಗಳೂರು: ನಿಮ್ಮ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ‘ಜ್ಞಾನ ದೀವಿಗೆ’ ಕಾರ್ಯಕ್ರಮಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ನಟ ಶಿವರಾಜ್ ಕುಮಾರ್ ಅವರು ಕೈ ಜೋಡಿಸಿ, 100 ಟ್ಯಾಬ್‍ಗಳನ್ನು ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಶಕ್ತಿ ಇರುವವರು ಒಂದು ಟ್ಯಾಬ್ ಆದರೂ ನೀಡಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

ಜ್ಞಾನ ದೀವಿಗೆ’ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಉತ್ತಮ ಕೆಲಸ ಮಾಡುತ್ತಿದ್ದೀರಿ, ರೋಟರಿ ಸಂಸ್ಥೆ ಜೊತೆ ಸೇರಿ ಈ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಕೊರೊನಾ ಬಂದ ಮೇಲೆ ನಾವೆಲ್ಲ ಸ್ವಾರ್ಥಿಗಳಾಗಿದ್ದೇವೆ. ಇಡೀ ಪ್ರಪಂಚಕ್ಕೆ ಈ ಸಮಸ್ಯೆ ಆವರಿಸಿದೆ. ಏನೇ ಸಮಸ್ಯೆ ಬಂದರೂ ಸಹಾಯದ ಮನೋಭಾವವಿದ್ದರೆ ಯಾರು ಬೇಕಾದರೂ ಮಾಡಬಹುದು ಎಂದು ಕರೆ ನೀಡಿದರು

ವಿದ್ಯಾದಾನ ಶ್ರೇಷ್ಠ ದಾನ. ಇದಕ್ಕೆ ಸಹಾಯ ಮಾಡುವುದು ಸಹ ನಮ್ಮ ಜವಾಬ್ದಾರಿ. ಪಬ್ಲಿಕ್ ಟಿವಿಯಲ್ಲಿ ಈ ಅಭಿಯಾನ ಕಾರ್ಯಕ್ರಮ ನೋಡಿ, ಪತ್ನಿ ಗೀತಾ ಅವರು ನಾವೂ ಸಹಾಯ ಮಾಡಬೇಕು ಎಂದು ಹೇಳಿದರು. ಅಲ್ಲದೆ ಎಸ್‍ಎಸ್‍ಎಲ್‍ಸಿ ಎನ್ನುವುದು ವಿದ್ಯಾರ್ಥಿಗಳ ಜೀವನದ ಟರ್ನಿಂಗ್ ಪಾಯಿಂಟ್, ಹೀಗಾಗಿ ನಾನು ಇದಕ್ಕೆ ಕೈ ಜೋಡಿಸುತ್ತೇನೆ ಎಂದು ತಿಳಿಸಿದರು.

ಈ ಅಭಿಯಾನ ದೊಡ್ಡ ಅಲೆ, ಎಲ್ಲರೂ ಇದಕ್ಕೆ ಕೈ ಜೋಡಿಸಬೇಕು. ನನ್ನ ಕಡೆಯಿಂದ ಸಣ್ಣ ಸಹಾಯ ಎಂಬಂತೆ 100 ಟ್ಯಾಬ್‍ಗಳನ್ನು ನೀಡಲು ನಿರ್ಧರಿಸಿದ್ದೇನೆ. ರಾಜ್ಯದ ಜನತೆ ಎಲ್ಲರೂ ಸಾಧ್ಯವಾದರೆ ಒಂದೊಂದು ಟ್ಯಾಬ್ ನೀಡಿ ಸಹಾಯ ಮಾಡಿ. ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆ. ನಾವು ಮಾಡಿ ಇತರರಿಗೆ ಹೇಳಬೇಕು. ಹೀಗಾಗಿ ನಾನು ಈ ಕೆಲಸ ಮಾಡಿದೆ. ಎಲ್ಲರೂ ತಮ್ಮ ಕೈಲಾದಷ್ಟು ಸಹಾಯ ಮಾಡಿ. ಒಂದು ಕೈಯಿಂದ ಹತ್ತು, ನೂರು, ಸಾವಿರ, ಲಕ್ಷ, ಕೋಟಿ ಹೀಗೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ