ಬೆಂಗಳೂರು: ನಿಮ್ಮ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಸಹಯೋಗದ ‘ಜ್ಞಾನದೀವಿಗೆ’ ಕಾರ್ಯಕ್ರಮದ ವತಿಯಿಂದ ವಿವಿಧ ಜಿಲ್ಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು.
ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್ ರಂಗನಾಥ್, ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಗವರ್ನರ್ ಕೇಶವಮೂರ್ತಿ, ಆರೋಗ್ಯ ಸಚಿವ ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್, ಪಬ್ಲಿಕ್ ಟಿವಿ ಸಿಇಒ ಅರುಣ್ ಕುಮಾರ್, ಸಿಒಒ ಸಿ.ಕೆ ಹರೀಶ್ ಮಕ್ಕಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿದರು
ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಅನುಕೂಲವಾಗುವಂತೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ‘ಜ್ಞಾನದೀವಿಗೆ’ ಕಾರ್ಯಕ್ರಮಕ್ಕೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ. ಪಬ್ಲಿಕ್ ಟಿವಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್, ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಗವರ್ನರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
Laxmi News 24×7