Breaking News

ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದ್ದು, ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸ ಫಿಕ್ಸ್

Spread the love

ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ಮಧ್ಯಂತರ ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದ್ದು, ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸ ಫಿಕ್ಸ್ ಆಗಿದೆ.

ಈ ಹಿನ್ನೆಲೆಯಲ್ಲಿ ಅರ್ನಾಬ್ ರನ್ನು ನವಿ ಮುಂಬೈ ಬಳಿ ಇರುವ ತಲೋಜಾ ಜೈಲಿಗೆ ಕರೆದೊಯ್ಯಲಾಗಿದೆ. ಅಲಿಭಾಗ್ ನ್ಯಾಯಾಲಯ ಅರ್ನಾಬ್ ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೊರೊನಾ ಕಾರಣದಿಂದಾಗಿ ಅಲಿಭಾಗ್ ನಲ್ಲಿರುವ ಶಾಲೆಯನ್ನು ತಾತ್ಕಾಲಿಕ ಜೈಲನ್ನಾಗಿ ಮಾಡಿ, ಅರ್ನಾಬ್ ಅವರನ್ನು ಅಲ್ಲಿಯೇ ಇರಿಸಲಾಗಿತ್ತು.

ಈಗ ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಬಾಂಬೆ ಹೈಕೋರ್ಟ್, ತೀರ್ಪು ಕಾಯ್ದಿರಿಸಿದ್ದು, ಸೋಮವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಅರ್ನಾಬ್ ಅವರನ್ನು ಅಲಿಭಾಗ್ ನಿಂದ ತಲೋಜಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ