Breaking News

ವಿದ್ಯುತ್ ದರ  ಹೆಚ್ಚಿಸಿರುವ  ಸರ್ಕಾರ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ತಕ್ಷಣ ಆದೇಶವನ್ನು  ವಾಪಸ್ ಪಡೆಯುವಂತೆ ಒತ್ತಾಯ

Spread the love

ಬೆಂಗಳೂರು:  ವಿದ್ಯುತ್ ದರ  ಹೆಚ್ಚಿಸಿರುವ  ಸರ್ಕಾರ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ತಕ್ಷಣ ಆದೇಶವನ್ನು  ವಾಪಸ್ ಪಡೆಯುವಂತೆ ಒತ್ತಾಯ ಮಾಡಿದ್ದಾರೆ.

ವಿದ್ಯುತ್ ದರ ಹೆಚ್ಚಳ ವಿಚಾರವಾಗಿ  ನಗರದಲ್ಲಿ  ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಂದಾಗಿ  ದೇಶ, ರಾಜ್ಯಗಳು ಆರ್ಥಿಕ  ಸಂಕಷ್ಟದಲ್ಲಿವೆ.  ಇಂತಹ ಸಂದರ್ಭದಲ್ಲಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ.  ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳ ಮಾಡಿ ಬಿಜೆಪಿ ಸರ್ಕಾರ  ಜನರ ವಿರೋಧಿ ನೀತಿ ಅನುಸರಿಸುತ್ತಿದೆ.  ಕೈಗಾರಿಕೆ, ವ್ಯಾಪಾರ, ರೈತರಿಗೂ ಇದು ಬರೆ ಎಳೆದಿದೆ. ದರ ಏರಿಕೆಯನ್ನ ಕೂಡಲೇ ವಾಪಸ್ ಪಡೆಯಬೇಕು. ಒಂದೂವರೆ ವರ್ಷ ದರ ಏರಿಕೆ ತೀರ್ಮಾನ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ನಾನು ಇಂಧನ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ನನಗೂ ಅಲ್ಪಸ್ವಲ್ಪ ಮಾಹಿತಿ ಇದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಇಂತಹ ವೇಳೆ ಏರಿಕೆ ಮಾಡಿದ್ದು ಸರಿಯಲ್ಲ. ಕೂಡಲೇ ಸರ್ಕಾರ ಆದೇಶವನ್ನ ವಾಪಸ್ ಪಡೆಯಬೇಕು. ಒಂದು ವಾರದೊಳಗೆ ಆದೇಶ ಮಾಡದಿದ್ರೆ ರಾಜ್ಯಾದ್ಯಂತ ನಮ್ಮ ಹೋರಾಟ ಅನಿವಾರ್ಯ. 23 ರಿಂದ 28ರ ವರೆಗೆ ತಾಲೂಕು ಕೇಂದ್ರದಲ್ಲಿ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ