Home / ರಾಜಕೀಯ / ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ 100 ವರ್ಷಗಳು ಪೂರ್ಣ ನ.10ರಂದು  ವಿಶೇಷ ಕಾರ್ಯಕ್ರಮ:ಸತೀಶ್ ಜಾರಕಿಹೊಳಿ,

ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ 100 ವರ್ಷಗಳು ಪೂರ್ಣ ನ.10ರಂದು  ವಿಶೇಷ ಕಾರ್ಯಕ್ರಮ:ಸತೀಶ್ ಜಾರಕಿಹೊಳಿ,

Spread the love

ಧಾರವಾಡ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಇದೀಗ 100 ವರ್ಷಗಳು ಪೂರ್ಣಗೊಂಡಿದ್ದು,  ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ  ನ.10ರಂದು  ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸ್ವಾತಂತ್ರ್ಯ ಪೂರ್ವದ ಸಮಯದಲ್ಲಿ ಚಳವಳಿಯ ನಾಡಾಗಿದ್ದ ಧಾರವಾಡಕ್ಕೆ ಮಹಾತ್ಮ ಗಾಂಧೀಜಿ ಅವರು ಭೇಟಿ ನೀಡಿದ್ದರು. ಈ ಭೇಟಿ ದಿನ ಧಾರವಾಡಿಗರಿಗೆ ಸದಾ ಸ್ಮರಣೀಯ ದಿನ.

ಸ್ವಾತಂತ್ರ್ಯ ಚಳವಳಿಯು ದೇಶಾದ್ಯಂತ ಪಸರಿಸಲು ಪಣತೊಟ್ಟಿದ್ದ ಗಾಂಧೀಜಿ, 1920ರ ದಶಕದಲ್ಲಿ ಕರ್ನಾಟಕಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ. ಈ ಪೈಕಿ ಧಾರವಾಡ ನಗರಕ್ಕೆ ನ. 10ರಂದು ಭೇಟಿ ನೀಡಿದ್ದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಗಾಂಧೀಜಿ ಅವರು ಗುಜರಾತನಿಂದ ತಮ್ಮ ಪ್ರಯಾಣ ಆರಂಭಿಸಿ 1920ರ ನ. 7 ಮತ್ತು 8ರಂದು ನಿಪ್ಪಾಣಿ ಮತ್ತು ಚಿಕ್ಕೋಡಿ ಮತ್ತು ನ. 9ರಂದು ಬೆಳಗಾವಿಯಲ್ಲಿ ಸಭೆ ನಡೆಸಿದರು. ನಂತರ ನ. 10ರ ನಸುಕಿನಲ್ಲಿ ಧಾರವಾಡಕ್ಕೆ ಆಗಮಿಸಿ ಅಂದು ಧಾರವಾಡದಲ್ಲಿ ತಂಗಿದ್ದರು

 ಇದರಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಖ್ಯಾತ ಭಾಷಾ ತಜ್ಞ ಗಣೇಶ ದೇವಿ ಹಾಗೂ ಜಿಲ್ಲೆಯ ಶಾಸಕರು, ಕಾಂಗ್ರೆಸ್ ಪಕ್ಷದ  ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅನಿಲಕುಮಾರ್ ಪಾಟೀಲ  ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹುಸೇನ್ ಹಳ್ಳೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ