Breaking News

ಬಹಳ ದಿನದವರೆಗೂ ತಟಸ್ಥವಾಗಿಯೇ ಉಳಿದಿದ್ದ ಸಸಿಕಾಂತ್ ಸೇಂಥಿಲ್ ಅವರು ಕೊನೆಗೆ ಕಾಂಗ್ರೆಸ್ ಸೇರುವ ನಿರ್ಧಾರ

Spread the love

ಚನ್ನೈ, ನ.9- ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೇಂಥಿಲ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿ ಅರ್ಧಕ್ಕೆ ಹುದ್ದೆ ಬಿಟ್ಟು ಹೋದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೇಂಥಿಲ್ ನಡುವೆ ಮುಖಾಮುಖು ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಸಿಕಾಂತ್ ಸೇಂಥಿಲ್ ಅವರು 2009ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದು, ಕರ್ನಾಟಕ ಕೇಡರ್‍ನಲ್ಲಿ ಕೆಲಸ ಮಾಡಿದ್ದರು. ಸೇವಾ ಅವಧಿಯಲ್ಲೇ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆ ಸಂದರ್ಭದಲ್ಲಿ ಅವರು ಬರೆದಿದ್ದ ರಾಜೀನಾಮೆ ಪತ್ರ ವಿವಾದಕ್ಕೆ ಕಾರಣವಾಗಿತ್ತು.ಬಹಳ ದಿನದವರೆಗೂ ತಟಸ್ಥವಾಗಿಯೇ ಉಳಿದಿದ್ದ ಸಸಿಕಾಂತ್ ಸೇಂಥಿಲ್ ಅವರು ಕೊನೆಗೆ ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದರು. ಇಂದು ಚೆನ್ನೈನಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ದಿನೇಶ್‍ಗುಂಡೂರಾವ್ ಸಮ್ಮುಖದಲ್ಲಿ ಪಕ್ಷಕ್ಕ ಸೇರ್ಪಡೆಯಾದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ