ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ.
ತೀವ್ರ ಕೆಮ್ಮು ಕಾಣಿಸಿಕೊಂಡು ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ.ಬಿ.ಜಯಚಂದ್ರ ಅವರ ಪತ್ನಿ ನಿರ್ಮಲಾರಿಗೂ ಕೊರೊನಾ ಸೋಂಕು ತಗುಲಿದೆ. ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿದವರು ಆರೋಗ್ಯದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಟಿ.ಬಿ.ಜಯಚಂದ್ರ ಮನವಿ ಮಾಡಿಕೊಂಡಿದ್ದಾರೆ.