Breaking News
Home / ರಾಜಕೀಯ / ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿಬಿಜೆಪಿ ಮುನ್ನಡೆ

ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿಬಿಜೆಪಿ ಮುನ್ನಡೆ

Spread the love

ನವದೆಹಲಿ: ಕರ್ನಾಟಕದ ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲೂ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದೆ.ಮಧ್ಯಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಈ ಪೈಕಿ ಬಿಜೆಪಿ 19 ರಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್‌ 8, ಬಿಎಸ್‌ಪಿ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಗುಜರಾತ್‌ನಲ್ಲಿ 8 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 8 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಉತ್ತರ ಪ್ರದೇಶದ 7 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ 5 ರಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ಎರಡರಲ್ಲಿ ಎಸ್‌ಪಿ ಮುನ್ನಡೆಯಲ್ಲಿದೆ.

ಮಣಿಪುರದಲ್ಲಿ 5 ಕ್ಷೇತ್ರಗಳ ಪೈಕಿ ಈಗಾಗಲೇ 1 ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿದ್ದು 3ರಲ್ಲಿ ಮುನ್ನಡೆಯಲ್ಲಿದೆ. ಒಬ್ಬರು ಪಕ್ಷೇತರ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ.

ಚತ್ತೀಸ್‌ಗಢ, ಹರ್ಯಾಣದಲ್ಲಿ ಒಂದು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಜಾರ್ಖಂಡ್‌ನಲ್ಲಿ 1 ಕ್ಷೇತ್ರದಲ್ಲಿ ಬಿಜೆಪಿ, ಇನ್ನೊಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ತೆಲಂಗಾಣದ ಒಂದು ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ.

ನಾಗಾಲ್ಯಾಂಡ್‌ನ 2 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಒಡಿಶಾದ ಎರಡು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

ಬಿಹಾರದ ವಾಲ್ಮಿಖಿ ನಗರಕ್ಕೆ ನಡೆಯುತ್ತಿರುವ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಯು ಮುನ್ನಡೆಯಲ್ಲಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ