Breaking News

ಬಿಜೆಪಿ ಗೆಲುವನ್ನ ವ್ಯಾಖ್ಯಾನಿಸಿದ H.D.K.

Spread the love

ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ. ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ಕಾರ್ಯಕರ್ತರಿಗೆ ಉತ್ಸಾಹ ತುಂಬಿದ್ದಾರೆ.


Spread the love

About Laxminews 24x7

Check Also

ಅಕ್ರಮ ಗೋವು ಸಾಗಾಟ: 10 ಕಿಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು ಕೊಟ್ಟ ಪೊಲೀಸರು

Spread the loveಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಸರ್​ ಲಾರಿಯನ್ನು ಬೆನ್ನಟ್ಟಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ