ಬೆಂಗಳೂರು: ಸಿಲಿಕಾನ್ ಸಿಟಿಯ ಹೊಸಗುಡ್ಡದಹಳ್ಳಿಯಲ್ಲಿ ಬೆಂಕಿ ದುರಂತಕ್ಕೆ ಸಂಬಂಧಪಟ್ಟಂತೆ 1 ಬ್ಯಾರಲ್ ಸ್ಯಾನಿಟೈಸರ್ ಬಿದ್ದು ಅನಾಹುತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ನಡೆದು 20 ಗಂಟೆ ಕಳೆದರೂ ಇನ್ನೂ ಬೆಂಕಿ ಜ್ವಾಲೆ ಆರಿಲ್ಲ. ಕೆಮಿಕಲ್ ಫ್ಯಾಕ್ಟರಿಯಿಂದ ಬೆಂಕಿಯ ಜ್ವಾಲೆ ಬಾನೆತ್ತರಕ್ಕೆ ಚಿಮ್ಮುತ್ತಿದೆ. ಅಕ್ಕ-ಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸುವ ಆತಂಕ ಸ್ಥಳೀಯರಿಗೆ ಉಂಟಾಗಿದೆ. ಗೋಡೌನ್ ಅಕ್ಕಪಕ್ಕದ ಹತ್ತಾರು ಮನೆಗಳ ನಿವಾಸಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಶಿಫ್ಟ್ ಮಾಡಲಾಗಿದೆ.
ನಿನ್ನೆ ಮಧ್ಯಾಹ್ನ ಅವಘಡ ಸಂಭವಿಸುತ್ತಿದ್ದಂತೆಯೇ ಅಗ್ನಿಶಾಮಕದ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದರು. ರಾತ್ರಿಯಿಡೀ ಕಾರ್ಯಾಚರಣೆ ನಡೆದರೂ ಜ್ವಾಲೆ ಮಾತ್ರ ಆರಿಲ್ಲ. ಈ ಮೂಲಕ ಬೆಂಕಿ ಇನ್ನೂ ಸಂಪೂರ್ಣವಾಗಿ ತಹಬದಿಗೆ ಬಂದಿಲ್ಲ. ಈಗಲೂ ನೂರಾರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Laxmi News 24×7