ಬೆಂಗಳೂರು: ಎರಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ.
ದೀಪಾವಳಿ ಹಬ್ಬದ ಬಳಿಕ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದ್ದು, ಕೆಲವು ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಅವಕಾಶ ನೀಡಲು ರಾಜ್ಯ ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.
ಹಾಲಿ ಸಚಿವರಾದ ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ನಾಲ್ವರು ಸಚಿವರಿಗೆ ಕೋಕ್ ನೀಡಿ ಖಾಲಿ ಇರುವ ಏಳು ಸ್ಥಾನ ಸೇರಿ 10 ಮಂದಿ ಹೊಸಬರಿಗೆ ಅವಕಾಶ ಕೊಡಲಾಗುತ್ತಿದೆ. ಅಲ್ಲದೆ, ಎರಡು ಸಚಿವ ಸ್ಥಾನವನ್ನು ಖಾಲಿ ಉಳಿಸಿಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಇನ್ನು 2-3 ದಿನಗಳ ನಂತರ ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಸಂಪುಟ ಪುನಾರಚನೆ ಹಾಗೂ ವಿಸ್ತರಣೆಗೆ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದರೆ ನವೆಂಬರ್ 18 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
Laxmi News 24×7