Breaking News

ಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ  ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Spread the love

ರಾಯಚೂರು: ನಗರದ ಹೊರವಲಯದ ಮಂಜರ್ಲಾ ಕ್ರಾಸ್ ಬಳಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ  ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಮೃತರನ್ನ ಬಸವರಾಜ, ಗಣೇಶ ಹಾಗೂ ಅಭಿಷೇಕ ಎಂದು ಗುರುತಿಸಲಾಗಿದೆ. ಉಳಿದಂತೆ ಸಿದ್ದಾರ್ಥ ಹಾಗೂ ಭೀಮಾರೆಡ್ಡಿ ಗಂಭೀರ ಗಾಯಗೊಂಡಿದ್ದಾರೆ. ಎಲ್ಲರೂ ರಾಯಚೂರು ನವೋದಯ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.

ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ರಾತ್ರಿ ಊಟ ಮುಗಿಸಿ ಮಂತ್ರಾಲಯ ಕಡೆಯಿಂದ ರಾಯಚೂರಿಗೆ ಬರುತ್ತಿದ್ದ ವಿದ್ಯಾರ್ಥಿಗಳ ಕಾರಿಗೆ ತೆಲಂಗಾಣ ಪಾಸ್ ಇರುವ ಕಾರು ಡಿಕ್ಕಿ ಹೊಡೆದಿದೆ. ಎರಡು ಕಾರುಗಳು ಡಿಕ್ಕಿಯಾದ ರಭಸಕ್ಕೆ ವಿದ್ಯಾರ್ಥಿಗಳಿದ್ದ ಕಾರು ಪಲ್ಟಿಯಾಗಿದೆ.

ಅಪಘಾತದಲ್ಲಿ ಎರಡೂ ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಘಟನೆ ಹಿನ್ನೆಲೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ