Breaking News

ಜವಾಬ್ದಾರಿಯುತ ಸ್ಥಾನದಲ್ಲಿರುವವರುಅಸಭ್ಯವಾಗಿ ನಡೆದುಕೊಳ್ಳುವುದನ್ನು ನಾವು ಖಂಡಿಸುತ್ತೇವೆ.: ಸತೀಶ್ ಜಾರಕಿಹೊಳಿ

Spread the love

ಗೋಕಾಕ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ಮಹಾಲಿಂಗಪುರ ಪುರಸಭೆಗೆ ಸಂಬಂಧಿಸಿದಂತೆ ನಡೆದ ಘಟನೆಯು ಒಂದು ಕೆಟ್ಟ ಸಂಪ್ರದಾಯವಾಗಿದೆ. ಅಧ್ಯಕ್ಷೆ ಆಕಾಂಕ್ಷಿಯಾಗಿರುವ ಮಹಿಳೆಯನ್ನು ಎಳೆದಾಡಿ ಬಿಜೆಪಿ ಶಾಸಕ ಸಿದ್ದು ಸವದಿ ಸೇರಿದಂತೆ ಇತರರು ಅಸಭ್ಯ ವರ್ತನೆ ತೋರಿರುವುದು ಒಂದು ಕೆಟ್ಟ ಸಂಪ್ರದಾಯಾವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

 

 

ನಗರದ ಅವರ ಹೀಲ್ ಗಾರ್ಡನ್ ಕಛೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದನ್ನು ನಾವು ಖಂಡಿಸುತ್ತೇವೆ. ಈ ಸಂಬಂಧ ನಮ್ಮ ಪಕ್ಷ ಪ್ರತಿಭಟನೆ ನಡೆಸಲಿದೆ.

ಕೂಡಲೇ ಈ ಘಟನೆಗೆ ಸಂಬಂಧಿಸಿದಂತೆ ಅಸಭ್ಯವಾಗಿ ನಡೆದುಕೊಂಡ ಎಲ್ಲಾರ ಮೇಲೂ ಪೊಲೀಸರು ಹಾಗೂ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ