Breaking News

ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಕಳ್ಳರ ತಂಡ ಪತ್ತೆ ಹಚ್ಚಿದ ಖಾನಾಪುರ ಪೊಲೀಸರು

Spread the love

ಖಾನಾಪುರ: ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಕಳ್ಳರ ತಂಡವೊಂದನ್ನು ಪತ್ತೆ ಹಚ್ಚಿದ ಖಾನಾಪುರ ಪೊಲೀಸರು ಇಬ್ಬರನ್ನು ಬಂಧಿಸಿ ಬಂಧಿತರಿಂದ ೨.೫೪ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡ ಘಟನೆ ಬುಧವಾರ ವರದಿಯಾಗಿದೆ.
ಪಟ್ಟಣದ ಮಲಪ್ರಭಾ ಕ್ರೀಡಾಂಗಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಬೆಳಗಾವಿ ವಡಗಾಂವ ನಿವಾಸಿ ಪರಶುರಾಮ ದಂಡಗಲ್ ಮತ್ತು ಶಹಾಪುರ-ಖಾಸಬಾಗದ ನಿವಾಸಿ ವಿನಯ ಅಣ್ವೇಕರ ಎಂಬಾತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ಅವರು ನೀಡಿದ ಮಾಹಿತಿಯಂತೆ ಬಂಧಿತರಿಂದ ೭೯ ಗ್ರಾಂ ಚಿನ್ನಾಭರಣ ಮತ್ತು ೧೩೫ ಗ್ರಾಂ ಬೆಳ್ಳಯ ಆಭರಣ ಸೇರಿದಂತೆ ೨.೬೫ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಮತ್ತು ಕಳ್ಳತನಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿ.ಪಿ.ಐ ಸುರೇಶ ಸಿಂಗಿ ಮಾಹಿತಿ ನೀಡಿದ್ದಾರೆ.

ಎಸ್.ಪಿ ಲಕ್ಷ್ಮಣ ನಿಂಬರಗಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯಲ್ಲಿ ಖಾನಾಪುರ ಸಿ.ಪಿ.ಐ ಸುರೇಶ ಶಿಂಗಿ, ಅಪರಾಧ ವಿಭಾಗದ ಪಿ.ಎಸ್.ಐ ಶಿವಾನಂದ ಕಾರಜೋಳ, ಅಪರಾಧ ವಿಭಾಗದ ಪ್ರೊಬೆಶನರಿ ಪಿ.ಎಸ್.ಐ ಬಸಗೌಡ ನೇರ್ಲೀ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಈ ಕುರಿತು ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ