ಮಂಗಳೂರು : ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ನಗರಕ್ಕೆ ಇಂದು ಬೆಳಿಗ್ಗೆ ಆಗಮಿಸಿದ ಅವರು ಮಾತನಾಡಿ, ಕ್ಷೇತ್ರದಲ್ಲಿ ಮತದಾರರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎಂದು. ಹಾಗಾದ್ರೆ ಅವರು ಹಾಕಿದ ಮತಗಳು ಎಲ್ಲಿ ಹೋಗಿವೆ ಎನ್ನುವ ಚರ್ಚೆಗಳು ನಡೆಯುತ್ತಿವೆ.
ನಮ್ಮ ಪಕ್ಷದ ಎಲ್ಲ ನಾಯಕರಿಗೂ ಉಪಚುನಾವಣೆಯ ಫಲಿತಾಂಶದ ಬಗ್ಗೆ ಅನುಮಾನವಿದೆ. ಇವಿಎಂ ಮೆಷಿನ್ ಸೇರಿದಂತೆ ಎಲ್ಲ ಅಂಶಗಳ ಬಗ್ಗೆ ಕಾಂಗ್ರೆಸ್ ವಿಸ್ತೃತ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.
Laxmi News 24×7