ಬಿಜೆಪಿ ಮಹಾನಗರ ಹಾಗೂ ಗ್ರಾಮೀಣ ಜಿಲ್ಲಾ ಕಾರ್ಯಾಲಯ ನಿರ್ಮಾಣಕ್ಕೆ ಬೆಳಗಾವಿ ಮಹಾನಗರದಲ್ಲಿ 30 ಗುಂಟು ಜಾಗ ಮಂಜೂರಾಗಿದೆ ಎಂದು ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಬೆಳಗಾವಿ ಮಹಾನಗರ ಜಿಲ್ಲೆಯಲ್ಲಿರುವ ಎಲ್ಲ ಕಾರ್ಯಕರ್ತರಿಗೂ ಬೆಳಗಾವಿಯಲ್ಲಿ ತಮ್ಮದೇ ಆದ ಒಂದು ಸ್ವಂತ ಬಿಜೆಪಿ ಪಕ್ಷದ ಕಾರ್ಯಾಲಯ ಇರಬೇಕೆಂಬುದು ಬಹುದಿನಗಳ ಆಸೆಯಾಗಿತ್ತು. ಬೆಳಗಾವಿ ನಗರದ ಧರ್ಮನಾಥ ಭವನದ ಹಿಂದೆ ಇರುವ ಮಹಾನಗರ ಪಾಲಿಕೆಯ ಜಾಗದ 30 ಗುಂಟೆ ಭೂಮಿಯನ್ನು ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯ ಕಟ್ಟಡ ಕಟ್ಟಲು ನೀಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.
ಬಹಳ ಬೇಗನೆ ಅಲ್ಲಿ ಕಟ್ಟಡ ನಿರ್ಮಾಣ ಮಾಡುವ ಕೆಲಸ ಪ್ರಾರಂಭವಾಗುತ್ತದೆ ಎಂದೂ ಅವರು ಹೇಳಿದ್ದಾರೆ.
Laxmi News 24×7