Breaking News

2021ರ ಹೊಸ ವರ್ಷಾಚರಣೆಗೆ ಬ್ರೇಕ್:ರಾಜ್ಯ ಸರ್ಕಾರ ಬಿಗ್ ಶಾಕ್

Spread the love

ಬೆಂಗಳೂರು: 2021ರ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದ್ದು, ಸಿಲಿಕಾನ್ ಸಿಟಿ ಜನರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.

ಹೊಸ ವರ್ಷಾಚರಣೆಗೆ ಡಿಸೆಂಬರ್ 31ರ ಮಧ್ಯ ರಾತ್ರಿ ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಕಿಕ್ಕಿರಿದು ಜನರು ಸೇರುತ್ತಿದ್ದರು. ಸಂಭ್ರಮಾಚರಣೆ ಮುಗಿಲು ಮುಟ್ಟುತ್ತಿತ್ತು. ಆದರೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದೆ.

ಹೊಸ ವರ್ಷಾಚರಣೆಗೆ ಕಿಕ್ಕಿರಿದು ಜನ ಸೇರುವುದರಿಂದ ಸಾಮಾಜಿಕ ಅಂತರ ಪಾಲನೆ ಕಷ್ಟಸಾಧ್ಯ. ಕೊರೊನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಹೀಗಾಗಿ ಹೊಸ ವರ್ಷದ ಸಂಭ್ರಮಾಚರಣೆಗೆ ಯಾವುದೇ ರೀತಿಯ ಮೋಜು-ಮಸ್ತಿ, ಪಾರ್ಟಿ ಆಯೋಜನೆಗಳನ್ನು ಮಾಡುವಂತಿಲ್ಲ. ಕಿಕ್ಕಿರಿದು ಜನರು ಸೇರುವಂತಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ