Breaking News

ಆಶ್ರಯ ಮನೆ ಹಂಚಿಕೆಯಲ್ಲಿ ಅಕ್ರಮನ್ಯಾಯಕ್ಕಾಗಿ ಟವರ್ ಏರಿ ಕುಳಿತ ದಂಪತಿ

Spread the love

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ದಂಪತಿಗಳು ಮೊಬೈಲ್ ಟವರ್ ಏರಿ ಕುಳಿತ ಘಟನೆ ಜಿಲ್ಲೆಯ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ.

ಮೋಹನ್ ರಾಜ್ ಮತ್ತು ಚಂದನ ಮೊಬೈಲ್ ಟವರ್ ಏರಿ ಕುಳಿತ ದಂಪತಿ. ಬಂಟೇನಹಳ್ಳಿ ಗ್ರಾಮ ಪಂಚಾತಿಯಲ್ಲಿ ಆಶ್ರಯ ಮನೆ ನೀಡುವುದಾಗಿ ದಂಪತಿಯಿಂದ ಒಂದು ಸಾವಿರ ಹಣ ಪಡೆದಿರುವ ಆರೋಪ ಕೇಳಿ ಬಂದಿದೆ. ಆದರೆ ಕೊನೆಗೆ ದಂಪತಿಗೆ ಆಶ್ರಯ ಮನೆ ನೀಡದೆ ವಂಚನೆ ಮಾಡಿರುವುದಾಗಿ ಆರೋಪ ಮಾಡುತ್ತಿದ್ದಾರೆ.

ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುವುದಾಗಿ ದಂಪತಿ ಟವರ್ ಏರಿ ಕುಳಿತಿದ್ದಾರೆ. ಈ ಕುರಿತ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಟವರ್‍ನಿಂದ ಕೆಳಗಿಳಿಯುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ