Breaking News
Home / Uncategorized / ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಸಿಗ್ನಲ್ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಸಿಗ್ನಲ್ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

Spread the love

ಬೆಂಗಳೂರು,ನ.13- ಉಪಚುನಾವಣೆ ಪೂರ್ಣಗೊಂಡ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಭರವಸೆ ನೀಡಿದ್ದರು. ಆದರೆ, ಇದೀಗ ನವೆಂಬರ್ 20ಕ್ಕೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಬಂದ ಬಂಡಾಯಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಸಂಪುಟ ವಿಸ್ತರಣೆ ಕುರಿತು ಕೇಂದ್ರೀಯ ನಾಯಕತ್ವ ಮುಖ್ಯಮಂತ್ರಿಗಳ ಕೈಗಳನ್ನು ಕಟ್ಟಿಹಾಕಿದಂತಾಗಿದೆ.

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತಡವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಮತ್ತಷ್ಟು ಶಕ್ತಿ ಹೆಚ್ಚಿಸಿಕೊಂಡಿರುವ ಬಿಜೆಪಿಯಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಓಡಾಟ ಹೆಚ್ಚಿಸುವಂತೆ ಮಾಡಿದೆ.

ಕೇಂದ್ರೀಯ ನಾಯಕರು ಸಂಪುಟ ವಿಸ್ತರಣಗೆ ಗ್ರೀನ್ ಸಿಗ್ನಲ್ ನೀಡುವವರೆಗೂ ಮುಖ್ಯಂತ್ರಿಗಳು ಏನನ್ನೂ ಮಾಡಲು ಸಾಧ್ಯವಿಲ್ಲ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರೀಯ ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಅನುಮತಿ ಕೋರಿದ್ದಾರೆ. ಆದರೆ, ನವೆಂಬರ್ 20ರವರೆಗೂ ಅನುಮತಿ ನೀಡಲು ಸಾಧ್ಯವಿಲ್ಲ ಎಂದಿದ್ದು, ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಸಿದ್ದರಾಮಯ್ಯ ಪರ ಕಿಡಿಕಾರಿರುವ ನಟ ಚೇತನ,

Spread the loveಚಿಕ್ಕೋಡಿ, ಮೇ 24: ಅಲೆಮಾರಿ ಜನಾಂಗಕ್ಕೆ ಬಜೆಟ್​​ನಲ್ಲಿ ಒಂದು ರೂಪಾಯಿ ಹಣ ನೀಡಿಲ್ಲ. ಅದನ್ನ ಬಿಟ್ಟು ಅಂಜನಾದ್ರಿ ಹನುಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ