ಬೆಂಗಳೂರು : ರಾಜ್ಯದಲ್ಲಿ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡವರಿಗೆ ಈಗ ಸಿಹಿ ಸುದ್ದಿ. ಮತ್ತೆ ತಮ್ಮ ಹಣವನ್ನು ಪಡೆಯಬಹುದಾಗಿದೆ.
ಹಣ ಕಳೆದುಕೊಂಡಿರುವರು ನವೆಂಬರ್ 24ರ ಒಳಗಾಗಿ ಆನ್ ಲೈನ್ ಮೂಲಕ ಹಣ ವಾಪಸ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ವಿಶೇಷಾಧಿಕಾರಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದಾರೆ.
ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ಕೂಡ ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-46885959 ಗೂ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿ ತಿಳಿಸಿದ್ದಾರೆ.