Breaking News

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟರನ್ನು ರಕ್ಷಿಸಲು ನೈಜ ಪತ್ರಕರ್ತರ ಕತ್ತು ಹಿಸುಕಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ಟ್ ರನಲ್ಲಿ ಬಿಜೆಪಿ ವಿರುದ್ಧ ಆಕ್ರೋಶ

Spread the love

ನವದೆಹಲಿ: “ಬಿಜೆಪಿ ನಾಯಕರ ಭ್ರಷ್ಟಾಚಾರ ಬಯಲಿಗೆಳೆದ ಪತ್ರಕರ್ತನನ್ನು ಅನುಮಾನಾಸ್ಪದವಾಗಿ ಹತ್ಯೆ ಮಾಡಲಾಗಿದೆ. ಅವರ ಕುಟುಂಬಕ್ಕೆ ತನ್ನ ಸಂತಾಪಗಳು. ಇದು ಮಧ್ಯಪ್ರದೇಶ ಅಥವಾ ಉತ್ತರ ಪ್ರದೇಶವಿರಲಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟರನ್ನು ರಕ್ಷಿಸಲು ನೈಜ ಪತ್ರಕರ್ತರ ಕತ್ತು ಹಿಸುಕಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ಟ್ ರನಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳ ಹಿಂದೆ ಕೂಡ ಈ ವಿಷಯ ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ, ಉತ್ತರ ಪ್ರದೇಶ ಪತ್ರಕರ್ತ ವಿನಯ್ ತಿವಾರಿ ವಿರುದ್ಧ ಬಿಜೆಪಿ ಗೂಂಡಾಗಳು ತೀವ್ರ ಹಲ್ಲೆ ನಡೆಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹಕ್ಕುಗಳು ಕೇವಲ ಆಯ್ದ ವ್ಯಕ್ತಿಗಳಿಗೆ ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಅಸ್ಸಾಂನಲ್ಲಿ ಪತ್ರಕರ್ತ ಪರಾಗ್ ಭುಯಾನ್ ಹತ್ಯೆಗೆ ಸಂಬಂಧಿಸದಿಂತೆ ಮಾತನಾಡಿದ ಅವರು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ಬಯಲಿಗೆಳೆಯುವ ಪತ್ರಕರ್ತರನ್ನು ಅನುಮಾನಾಸ್ಪದವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ನಿನ್ನೆಯಷ್ಟೇ ಅಸ್ಸಾಂ ಪತ್ರಕರ್ತ ಪರಾಗ್ ಭುಯಾನ್ ಅವರು ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿದ್ದು, ಇದು ಕೊಲೆ ಎಂದು ಆರೋಪಿಸಲಾಗುತ್ತಿದೆ. ಈ ಬಗ್ಗೆ ಅಸ್ಸಾಂ ಸರ್ಕಾರ ತನಿಖೆಗೆ ಆದೇಶಿಸಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ