Breaking News

ಗೆಳತಿ ನಂತ್ರ ಎನ್‍ಸಿಬಿ ವಿಚಾರಣೆಗೆ ಹಾಜರಾದ ಅರ್ಜುನ್ ರಾಂಪಾಲ್

Spread the love

ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಕಪೂರ್ ಎನ್‍ಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಬೆಳಗ್ಗೆ 11.10ಕ್ಕೆ ಎನ್‍ಸಿಬಿ ಕಚೇರಿ ಆಗಮಿಸಿದ ನಟನನ್ನ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದಕ್ಕೂ ಮುನ್ನ ಗುರುವಾರ ತಡರಾತ್ರಿ ರಾಂಪಾಲ್ ಗೆಳೆಯ ಪಾಲ್ ಬಾರ್ಟೆಲ್ ನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಗುರುವಾರ ವಿಚಾರಣೆಗೆ ಹಾಜರಾಗಿದ್ದ ಪಾಲ್ 10 ಗಂಟೆಯ ಬಳಿಕ ಅಧಿಕಾರಿಗಳು ಬಂಧಿಸುವ ಮೂಲಕ ಶಾಕ್ ನೀಡಿದ್ದರು. ಬಂಧಿತ ಪಾಲ್ ಆಸ್ಟ್ರೇಲಿಯಾ ಮೂಲಕ ಆರ್ಕಿಟೆಕ್ಟ್ ಆಗಿದ್ದು, ರಾಂಪಾಲ್ ಆಯೋಜನೆಯ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದರು. ಇಂದು ಅರ್ಜುನ್ ರಾಂಪಾಲ್ ಮತ್ತು ಪಾಲ್ ಇಬ್ಬರು ಮುಖಾಮುಖಿಯಾಗಿ ಕೂರಿಸಿ ಪ್ರಶ್ನೆ ಕೇಳುವ ಸಾಧ್ಯತೆಗಳಿವೆ. ಬುಧವಾರ ಮತ್ತು ಗುರುವಾರ (ನವೆಂಬರ್ 11 ಮತ್ತು 12)ಎನ್‍ಸಿಬಿ ಅಧಿಕಾರಿಗಳ ಮುಂದೆ ರಾಂಪಾಲ್ ಗೆಳತಿ ಗ್ಯಾಬ್ರಿಯೆಲಾ ಹಾಜರಾಗಿದ್ದರು.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ