ನವದೆಹಲಿ: ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ, ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‍ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ಸ್ಟಾಂಡ್‍ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ.
ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. ‘ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ’ ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು 8 ಮಂದಿಗೆ ಅವಕಾಶ ನೀಡಿದ್ದರು.
ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಜಾಗ ಹಾಳು ಮಾಡಲ್ಲ’ ನನಗೆ ನನ್ನ ಟ್ವೀಟ್‍ಗಳನ್ನು ಹಿಂಪಡೆಯುವ ಉದ್ದೇಶವಿಲ್ಲ. ಅವು ತಮ್ಮಷ್ಟಕ್ಕೆ ಏನು ಹೇಳಬೇಕೋ ಅದನ್ನು ಹೇಳುತ್ತವೆ ಎಂದು ಕಾಮ್ರಾ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದರು.
Laxmi News 24×7