Breaking News

ಇಂಜಿನ್‍ನಲ್ಲಿ ತಾಂತ್ರಿಕ ದೋಷಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ. ಎನ್-741 ಹೆಲಿಕಾಪ್ಟರ್,

Spread the love

ಕಾರವಾರ: ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಭಾರತೀಯ ನೌಕಾದಳಕ್ಕೆ ಸೇರಿದ ಎನ್-741 ಹೆಲಿಕಾಪ್ಟರ್, ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದ ಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ಬೆಂಗಳೂರಿನಿಂದ ಗೋವಾದತ್ತ ಹೆಲಿಕಾಪ್ಟರ್ ತೆರಳುತಿದ್ದು, ಈ ವೇಳೆ ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ನಂತರ ಪೈಲೆಟ್ ದಾಸನಕೊಪ್ಪದ ಮೈದಾನದಲ್ಲಿ ಜೀವರಕ್ಷಣೆಗಾಗಿ ಹೆಲಿಕಾಪ್ಟರ್ ಅನ್ನು ಕೆಳಗಿಳಿಸಿದ್ದಾರೆ. ಇಬ್ಬರು ಪೈಲಟ್, ಓರ್ವ ಕಮಾಂಡಿಂಗ್ ಆಫೀಸರ್ ಈ ಹೆಲಿಕಾಪ್ಟರಿನಲ್ಲಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ