Breaking News

2019-20 ರ ಬಜೆಟ್ ನಲ್ಲಿ ಘೋಷಿಸಿದ್ದಂತೆ  ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ

Spread the love

ಬೆಂಗಳೂರು: 2019-20 ರ ಬಜೆಟ್ ನಲ್ಲಿ ಘೋಷಿಸಿದ್ದಂತೆ  ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.  39 ಮಠಗಳಿಗೆ ತಲಾ 1ಕೋಟಿ ರೂ.,   143 ಮಠ, ಹಾಗೂ ದೇವಾಲಯಗಳ ಟ್ರಸ್ಟ್ ಗಳಿಗೆ 49.75 ಕೋಟಿ ಹಣ ನೀಡಲಾಗಿದೆ.

2019 -20 ಮತ್ತು 2020 – 21 ನೇ ಸಾಲಿನ ಬಜೆಟ್ ನಲ್ಲಿ ಮಠ-ಮಂದಿರ, ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಘೋಷಣೆ ಮಾಡಿದ್ದರೂ, ಕಾರಣಾಂತರದಿಂದ ಅನುದಾನ ಬಿಡುಗಡೆ ಮಾಡಿರಲಿಲ್ಲ. ಈಗ ಸಿಎಂ ಯಡಿಯೂರಪ್ಪ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬುದ್ಧ ಬಸವ ಅಂಬೇಡ್ಕರ್ ಪ್ರತಿಷ್ಠಾನ, ಚಿತ್ರದುರ್ಗ, ಜಗದ್ಗುರು ಚಾಲುವಾಡಿ ಪೀಠ ಸಿರಾ, ತುಮಕೂರು, ಸಿದ್ದರಾಮೇಶ್ವರಸ್ವಾಮಿ ಟ್ರಸ್ಟ್, ಶಿವಮೊಗ್ಗ. ಮುರುಘಾ ಮಠ  ಧಾರವಾಡ; ಸಿದ್ದಗಂಗಾ ಮಠ, ತುಮಕೂರು. ಮತ್ತು ಪುಷ್ಪಗಿರಿ ಮಹಾಸಂಸ್ಥಾನ ಮಠ, ಬೆಂಗಳೂರು ಇವು ತಲಾ 1 ಕೋಟಿ ರು ಅನುದಾನ ಪಡೆದಿವೆ.

ಸರ್ಕಾರ ಹಣ ಬಿಡುಗಡೆ ಮಾಡಿರುವುದಕ್ಕೆ ಸಂತಸ ವ್ಯಕ್ತ ಪಡಿಸಿರುವ ಕೋಟಾ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಸ್ವಲ್ಪ ಮಾತನಾಡಬೇಕಾದರೆ ಹದ್ದುಬಸ್ತಿನಲ್ಲಿ ಮಾತಾಡಿ,:H.D.K.

Spread the loveಬೆಂಗಳೂರು: ಸ್ವಲ ಮಾತಾಡಬೇಕಾದರೆ ಹದ್ದುಬಸ್ತಿನಲ್ಲಿ ಮಾತನಾಡಿ. ನನ್ನ ಬಗ್ಗೆ ನನ್ನ ಪಕ್ಷದ ಬಗ್ಗೆ ಚರ್ಚೆ ಮಾಡುವುದಕ್ಕೆ ನೀವು ಯಾರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ