Breaking News

ಲಾಕ್‍ಡೌನ್‍ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ.

Spread the love

ಬೆಂಗಳೂರು, ನ.14- ಕೋವಿಡ್-19ರ ಲಾಕ್‍ಡೌನ್‍ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ. ನವೆಂಬರ್ ತಿಂಗಳ ಎರಡು ವಾರ ಕಳೆದರೂ ಅಕ್ಟೋಬರ್ ತಿಂಗಳ ವೇತನವನ್ನು ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಿಲ್ಲ.

ರಾಜ್ಯಸರ್ಕಾರ ಈ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಿದರೆ ಮಾತ್ರ ವೇತನ ನೀಡಲು ಸಾಧ್ಯ ಎಂದು ಸಾರಿಗೆ ಸಂಸ್ಥೆ ಮೂಲಗಳು ತಿಳಿಸಿವೆ. ರಾಜ್ಯಸರ್ಕಾರ ನೆರವು ನೀಡದಿದ್ದರೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗುವುದಿಲ್ಲ.

ಅನ್‍ಲಾಕ್ ಜಾರಿಯಾದ ನಂತರ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಮರು ಆರಂಭವಾಗಿದೆ. ಆದರೂ ನಿರೀಕ್ಷಿತ ಪ್ರಮಾಣದಲ್ಲಿ ಆದಾಯ ಸಂಸ್ಥೆಗಳಿಗೆ ಬರುತ್ತಿಲ್ಲ. ದೀಪಾವಳಿ ಹಬ್ಬ ಬಂದರೂ ವೇತನ ನೀಡದಿರುವ ಬಗ್ಗೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಅಸಮಾಧಾನ ಹೊರಹಾಕಿದ್ದಾರೆ.

ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಬೇಕಾಗಿದ್ದ ಸಂದರ್ಭದಲ್ಲಿ ವೇತನವಿಲ್ಲದೆ ದೈನಂದಿನ ಖರ್ಚು-ವೆಚ್ಚಗಳಿಗೂ ಪರಿತಪಿಸಬೇಕಾದ ಸನ್ನಿವೇಶದಲ್ಲಿ ಇದ್ದೇವೆ ಎಂದು ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ