Breaking News

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡಿದರೆ ದೂರು ದಾಖಲು

Spread the love

ಬೆಂಗಳೂರು, ನ. 13: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ದೂರನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.
 
  ರಾಜ್ಯ ಸರಕಾರ ಹಸಿರು ಪಟಾಕಿ ಹೊರತಾಗಿ ಬೇರೆ ಯಾವುದೇ ಪಟಾಕಿಯನ್ನು ಮಾರಾಟ ಮಾಡುವುದು ಹಾಗೂ ಸಿಡಿಸುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಹಚ್ಚುವ, ಸಿಡಿಸುವ ಸಮಯ ರಾತ್ರಿ 8ರಿಂದ ಗಂಟೆಯಿಂದ ರಾತ್ರಿ 10ಗಂಟೆಯ ವರೆಗೆ ನಿಗದಿಪಡಿಸಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.
   
  ಹಸಿರು ಪಟಾಕಿಗಳಲ್ಲಿ ಸಾಮಾನ್ಯವಾಗಿ ಬಳಕೆ ಮಾಡುವ ರಾಸಾಯನಿಕಗಳಾದ ಅಲ್ಯೂಮಿನಿಯಂ, ಬೇರಿಯಂ, ಪೆÇಟಾಷಿಯಂ ನೈಟ್ರೇಟ್ ಮತ್ತು ಕಾರ್ಬನ್ ರಹಿತ ಅಥವಾ ಸಾಕಷ್ಟು ಕಡಿಮೆ ಪ್ರಮಾಣದಲ್ಲಿ ಬಳಕೆ ಮಾಡಿದ್ದು, ಬೇರೆ ಪಟಾಕಿಗಳಿಗೆ ಹೋಲಿಸಿದಾಗ ಸುಮಾರು ಶೇ.30ರಷ್ಟು ಕಡಿಮೆ ಕಣಗಳನ್ನು ಹೊರಹಾಕುತ್ತವೆ ಹಾಗೂ ಶಬ್ಧಮಟ್ಟವೂ 125 ಡೆಸಿಬಲ್‍ಗಿಂತ ಕಡಿಮೆ ಪ್ರಮಾಣದಲ್ಲಿರುತ್ತದೆ.
 
 ಪಟಾಕಿಗಳ ತಯಾರಕರು ತಮ್ಮ ಪಟಾಕಿಗಳ ಕಾರ್ಟೂನ್ ಬಾಕ್ಸ್ ಗಳ ಮೇಲೆ ರಾಷ್ಟ್ರೀಯ ಪರಿಸರ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ, ನಾಗಪುರರವರಿಂದ ಅನುಮೋದನೆ ಪಡೆದು ನೋಂದಣಿ, ಪ್ರಮಾಣ ಪತ್ರ ಹಾಗೂ ಲಾಂಛನ ಒಳಗೊಂಡ ಕ್ವಿಕ್ ರೆಸ್ಪಾನ್ಸ್ ಕೋಡ್ ಅನ್ನು ಪ್ರದರ್ಶಿಸಿರುತ್ತಾರೆ. ಹಸಿರು ಪಟಾಕಿಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ www.kspcb.gov.in  ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ