ಬೆಳಗಾವಿ : ನಾನೊಬ್ಬ ನುರಿತ ರಾಜಕಾರಣಿಯಾಗಿದ್ದು, 8 ಬಾರಿ ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕಾಗಿ ಯಾರ ಹಿಂದೆಯೂ ಹೋಗುವುದಿಲ್ಲ. ಸಚಿವ ಸ್ಥಾನ ಸಿಕ್ಕರೆ ಕೆಲಸ ಮಾಡಿ ತೋರಿಸುತ್ತೇನೆ ಎಂದು ಶಾಸಕ ಉಮೇಶ ಕತ್ತಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಅಧಿಕಾರ ಬೇಕು ಎಂಬ ಮನೋಭಾವ ನಮಗಿಲ್ಲ. ಮಂತ್ರಿಯಾದರೆ ಕೆಲಸ ಮಾಡುತ್ತೇನೆ. ಸಿಗದಿದ್ದರೆ ಶಾಸಕನಾಗಿಯೇ ಮುಂದುವರೆಯುತ್ತೇನೆ ಅಂತ ಹೇಳಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮನಸು ಮಾಡಿದರೆ ಸಚಿವ ಸ್ಥಾನ ದೊರೆಯಲಿದೆ. ಅವರು ಸಹ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೊಡಲಿದ್ದಾರೆ ಎಂಬ ವಿಶ್ವಾಸ ವಿದೆ ಎಂದರು.
Laxmi News 24×7