ಮುಂಬೈ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಸೇತುವೆ ಮೇಲಿಂದ 50 ಅಡಿ ಆಳಕ್ಕೆ ಬಿದ್ದಿದೆ.
ಇಂದು ಬೆಳಗ್ಗೆ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಂಬ್ರಜ್ ಬಳಿ ಅಪಘಾತ ನಡೆದಿದೆ, ಮೂವರು ಪುರುಷರು, ಓರ್ವ ಮಹಿಳೆ ಮತ್ತು ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಬೆಳಗಿನ ಜಾವ ಮಂಜು ಕವಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
Laxmi News 24×7