ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ 50 ಕೋಟಿ ರೂಪಾಯಿ ಅನುದಾನ ನೀಡಿರುವುದನ್ನು ನಾನು ವಿರೋಧಿಸುತ್ತೇನೆ ಎಂದು ಸಾ.ರಾ ಗೋವಿಂದ್ ಅವರು ಹೇಳಿದ್ದಾರೆ.
ಅವರು, ಸಿಎಂ ನಿರ್ಧಾರವನ್ನು ಖಂಡಿಸಿ ನಾಡಿದ್ದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತೇವೆ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿ ಎಂದು ಮನವಿ ಮಾಡಿದರು.
. 2020-21ರಲ್ಲಿ ಕನ್ನಡ ಅನುಷ್ಟಾನ ಮತ್ತು ಅಭಿವೃದ್ಧಿಗಾಗಿ ಪ್ರಯತ್ನ ಮಾಡೋಣ ಅಂತ ಸಿಎಂ ಹೇಳಿದ್ದರು, ಆದರೆ ಇಲ್ಲಿಯವರೆಗೆ 2 ಕೋಟಿ ಕೇಳಿದರೂ ಕನ್ನಡ ಅಭಿವೃದ್ಧಿಗೆ ಕೊಡುವುದಕ್ಕೆ ಆಗಲಿಲ್ಲ. ಆದರೆ ಮರಾಠ ಅಭಿವೃದ್ಧಿಗೆ 50 ಕೋಟಿ ಕೊಟ್ಟಿದ್ದಾರೆ ಎಂದು ಗುಡುಗಿದರು.
ಬೆಳಗಾವಿ ಬಸವ ಕಲ್ಯಾಣ ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದರು. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ
Laxmi News 24×7