ಬೆಂಗಳೂರು: ಗುಪ್ತಚರ(ಡಿಜಿಜಿಐ) ವಿಭಾಗ ಹಾಗೂ ಜಿಎಸ್‍ಟಿ ಬೆಂಗಳೂರು ಝೋನಾಲ್ ಯುನಿಟ್(ಬಿಝೆಡ್‍ಯು) ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 200 ಕೋಟಿ ರೂಪಾಯಿ ಜಿಎಸ್‍ಟಿ ತೆರಿಗೆ ವಂಚನೆ ಮಾಡಿದ ಆರೋಪದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಚೀನಾ ಮೂಲದ ಕಂಪನಿಗಳು ಸೇರಿದಂತೆ ಬಹುರಾಷ್ಟ್ರೀಯ ಕಂಪನಿಗಳಿಗೆ ಸೇವೆ ನೀಡಿದ ನೆಪದಲ್ಲಿ ಸುಮಾರು 1,000 ಕೋಟಿ ರೂಪಾಯಿ ಮೌಲ್ಯದ ನಕಲಿ ಇನ್‍ವೈಸ್‍ಗಳನ್ನು ಸೃಷ್ಟಿಸಲಾಗಿದೆ ಎಂದು ಆಪಾದಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಜಿಎಸ್‍ಟಿ ಗುಪ್ತಚರ ವಿಭಾಗದ ಮಹಾನಿರ್ದೇಶಕ ಕಚೇರಿಯ ಬೆಂಗಳೂರು ವಲಯದಲ್ಲಿ ಪತ್ತೆಯಾದ ಅತಿದೊಡ್ಡ ವಂಚನೆ ಜಾಲ ಇದು ಎನ್ನಲಾಗಿದೆ. ಮುಂಬೈ ಮೂಲದ ಚೀನಿ ಕಂಪನಿಗಳು ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ನಕಲಿ ತೆರಿಗೆ ಕ್ರೆಡಿಟ್‍ಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು ತೆರಿಗೆ ವಂಚನೆಯ ಪ್ರಮಾಣದ ಬಗ್ಗೆ ಲೆಕ್ಕಾಚಾರ ನಡೆದಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.
Laxmi News 24×7