Breaking News

ಏಳನೇ ಬಾರಿಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದನಿತೀಶ್ ಕುಮಾರ್

Spread the love

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಏಳನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟ್ನಾ ರಾಜಭವನದೊಳಗೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ನಿತೀಶ್ ಕುಮಾರ್ ನಾಲ್ಕನೇ ಅವಧಿಗೆ ಬಿಹಾರದ ಗದ್ದುಗೆ ಏರಿದ್ದಾರೆ.

ಇನ್ನು ಬಿಜೆಪಿಯ ತರ್ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ತರ್ಕಿಶೋರ್ ಪ್ರಸಾದ್ ಕಟಿಹಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸುಶೀಲ್ ಮೋದಿ ಅವರ ಆಪ್ತರಲ್ಲಿ ಒಬ್ಬರು. ರೇಣು ದೇವಿಯವರು ಬೇತಿಯಾ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದು, ಕಳೆದ ನಿತೀಶ್ ಕುಮಾರ್ ಸಂಪುಟದಲ್ಲಿ ಸಚಿವಯಾಗಿದ್ದರು.


Spread the love

About Laxminews 24x7

Check Also

ಕರಾವಳಿಯಲ್ಲಿ ಜನಪದ ದೀಪಾವಳಿ: ನರಕಾಸುರ ವಧೆ ನೆನಪಿಸುವ ಮುಳ್ಳಮುಟ್ಟೆ ಆಚರಣೆ

Spread the loveಕಾಪು: ತುಳುನಾಡು ಹಲವಾರು ಆಚರಣೆ, ಸಂಸ್ಕೃತಿ ಮತ್ತು ಸಂಸ್ಕಾರಗಳ ತವರೂರು. ಇಲ್ಲಿ ನಡೆಯುವ ಪ್ರತಿಯೊಂದು ಹಬ್ಬ, ಆಚರಣೆಗಳಿಗೂ ಅದರದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ