Breaking News

ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ತಕ್ಷಣ ಆರಂಭ:B.S.Y.

Spread the love

ಬೆಂಗಳೂರು: ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸಿಲು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಬೆನ್ನಲ್ಲೇ ಲಿಂಗಾಯತ ಸಮುದಾಯದ ಸಚಿವರು ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗವೂ ಸಹ ತಮ್ಮ ಸಮುದಾಯಕ್ಕೆ ಶೇ.16 ರಷ್ಟು ಮೀಸಲು ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿತ್ತು.
ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶೀಘ್ರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ನ.16ರಂದು ಪತ್ರ ಬರೆಯುವ ಮುಖಾಂತರ ಒತ್ತಾಯಿಸಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ