Breaking News
Home / Uncategorized / ರಾಜ್ಯದಲ್ಲಿ ಕೊರೊನಾ ಪ್ರಕರಣಳ ಸಂಖ್ಯೆ ಇಳಿಮುಖ

ರಾಜ್ಯದಲ್ಲಿ ಕೊರೊನಾ ಪ್ರಕರಣಳ ಸಂಖ್ಯೆ ಇಳಿಮುಖ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಳ ಸಂಖ್ಯೆ ಇಳಿಮುಖವಾಗಿದ್ದು, ಇಂದು 23 ಜಿಲ್ಲೆಗಳಲ್ಲಿ ಶೂನ್ಯ ಮರಣ ದಾಖಲಾಗಿದೆ. ಇಂದು 1,336 ಹೊಸ ಪ್ರಕರಣಗಳು ವರದಿಯಾಗಿದ್ದು, 2,100 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಈವರೆಗೂ ರಾಜ್ಯದಲ್ಲಿ 8,27,241 ಜನ ಗುಣಮುಖರಾಗಿದ್ದು, ಚೇತರಿಕೆ ದರ ಶೇ.95.72ರಷ್ಟಿದೆ. ಇನ್ನು ಕೋವಿಡ್ ಮರಣ ಪ್ರಮಾಣ ಶೇ.1.39 ಮತ್ತು ಖಚಿತ ಪ್ರಕರಣಗಳ ಪ್ರಮಾಣ ಶೇ.1.77ರಷ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,64,140ಕ್ಕೆ ಏರಿಕೆಯಾಗಿದ್ದು, 25,323 ಸಕ್ರಿಯ ಪ್ರಕರಣಗಳಿವೆ.

ಇಂದು ಕೊರೊನಾಗೆ 19 ಸೋಂಕಿತರು ಮರಣ ಹೊಂದಿದ್ದು, 693 ಜನ ಐಸಿಯುನಲ್ಲಿ ಚಿಕಿತ್ಸೆ ಪಡದುಕೊಳ್ಳುತ್ತಿದ್ದಾರೆ. ಇಂದು 75,384 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ರಾಜಧಾನಿಯಲ್ಲಿಯೂ ಸಹ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 729 ಮಂದಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 17,707 ಸಕ್ರಿಯ ಪ್ರಕರಣಗಳಿವೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಸಚಿವ ಕೆ.ಎನ್‌.ರಾಜಣ್ಣ

Spread the love ತುಮಕೂರು (ಗ್ರಾಮಾಂತರ): “ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಖಾಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ