ಬೆಂಗಳೂರು: ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಬಹುದಿನದ ಬೇಡಿಕೆ ಈಡೇರಿದೆ. ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ ಎಂದು ಹೇಳಿದರು.ಈ ಬೇಡಿಕೆ ನನ್ನ ಒಬ್ಬನದ್ದಲ್ಲ. ಬೇಡಿಕೆ ಇಟ್ಟವರ ಧ್ವನಿಯಾಗಿ ಇಂದು ನಾನು ಸರ್ಕಾರದ ಮುಂದೆ ಮನವಿ ಮಾಡಿಕೊಂಡಿದ್ದೇನೆ. ಇಂದು ಆ ಮನವಿಯನ್ನು ಸ್ವೀಕಾರ ಮಾಡಿಕೊಂಡು ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಎಲ್ಲಾ ಸಚಿವರು ವಿಜಯನಗರ ಜಿಲ್ಲೆ ಆಗಲೇಬೇಕು ಎಂಬ ಒಂದೇ ತೀರ್ಮಾನಕ್ಕೆ ಬದ್ಧರಾಗಿ ಅನುಮೋದನೆ ತೆಗೆದುಕೊಂಡಿದ್ದಾರೆ. ತಾಂತ್ರಿಕವಾಗಿ ಯಾವ ರೀತಿ ಹಾಗೂ ಯಾವ ಯಾವ ತಾಲೂಕುಗಳನ್ನು ಸೇರಿಸಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ಘೋಷಣೆ ಮಾಡುತ್ತಾರೆ. ಪ್ರತಿಯೊಂದು ಒಳ್ಳೆಯ ಕೆಲಸಗಳಾಗಬೇಕಾದಾಗ ಒತ್ತಾಯಗಳು ಇರುತ್ತವೆ. ಆಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರಿಪಡಿಸಲಾಗುತ್ತದೆ ಎಂದರು.
Laxmi News 24×7