Breaking News

ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ.: B.S.Y.

Spread the love

ಬೆಂಗಳೂರು: ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಅಜಿತ್ ಅವರ ಈ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಹೊರತು ಬೇರಾವ ಉದ್ದೇಶದಿಂದಲ್ಲ. ಈ ಬಗ್ಗೆ ಗೊಂದಲಗಳು ಬೇಡ ಎಂದು ಹೇಳಿದರು. ಇದೇ ವೇಳೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಬಾರದು. ಒಂದು ವೇಳೆ ಬಲವಂತದ ಬಂದ್ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ