Breaking News

ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ

Spread the love

 

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು

ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು

ಗೋಕಾಕ: ಮೇಕೆದಾಟು ಸಮಾನಾಂತರ ಆಣೆಕಟ್ಟು ಯೋಜನೆಗೆ ಬೇಕಿರುವ ಕೇಂದ್ರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ.
ಬುಧವಾರ ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ ಅವರನ್ನು ಭೇಟಿ ಮಾಡಿದ ಸಚಿವ ರಮೇಶ ಜಾರಕಿಹೊಳಿ, ಸುಪ್ರೀಂ ಕೋರ್ಟ ನಿರ್ದೇಶನದಂತೆ ಬೆಂಗಳೂರಿಗೆ ೪.೭೫ ಟಿಎಮ್‌ಸಿ ಕುಡಿಯುವ ನೀರನ್ನು ಒದಗಿಸಲು ಮೇಕೆದಾಟು ಸಮಾನಾಂತರ ಆಣೆಕಟ್ಟು ನಿರ್ಮಾಣ ಅವಶ್ಯಕತೆ ಇದ್ದು, ಇದಕ್ಕಿರುವ ಬಾಕಿ ಅನುಮತಿಗಳನ್ನು ಒದಗಿಸಲು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಕೃಷ್ಣಾ ಜಲ ವಿವಾದ ಸಂಬಂಧಿಸಿದಂತೆ ತುರ್ತಾಗಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಬೇಕು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂದು ಇದೆ ಸಂದರ್ಭದಲ್ಲಿ ಜಲಶಕ್ತಿ ಸಚಿವರನ್ನು ಕೋರಿದರು.
ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ಜಲ ವಿವಾದವನ್ನು ಆಯಾ ರಾಜ್ಯಗಳೇ ನ್ಯಾಯಾಧಿಕರಣದಲ್ಲಿ ಬಗೆಹರಿಸಿಕೊಳ್ಳಬೇಕು. ಕರ್ನಾಟಕದ ಪಾಲಿನ ನೀರನ್ನು ಯಾವುದೇ ಕಾರಣಕ್ಕೂ ಮರು ಹಂಚಿಕೆ ಮಾಡಬಾರದು ಮತ್ತು ಈ ವಿಷಯದಲ್ಲಿ ಕೇಂದ್ರ ಸರಕಾರ ಯಾವುದೇ ಮಧ್ಯಸ್ಥಿಕೆ ವಹಿಸಬಾರದೆಂದು ಸಚಿವ ರಮೇಶ ಜಾರಕಿಹೊಳಿ ಕೇಂದ್ರ ಜಲಶಕ್ತಿ ಸಚಿವರನ್ನು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ