ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದರು.
ಬೆಂಗಳೂರಿನಲ್ಲಿರುವ ಮೊಯ್ಲಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸತೀಶ ಜಾರಕಿಹೊಳಿ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಹಣಮನ್ನವರ, ಟಿ.ಈಶ್ವರ್, ನಾಗರಾಜ ಯಾದವ ಇದ್ದರು.
Laxmi News 24×7