Breaking News

ವಿದ್ಯುತ್ ದರ  ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು  ಆಗ್ರಹಿಸಿಪ್ರತಿಭಟನಾ ಮೆರವಣಿಗೆ

Spread the love

ಬೆಳಗಾವಿ: ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಬೆಳಗಾವಿ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇಲ್ಲಿ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು. ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಬಿಜೆಪಿ ಸರ್ಕಾರವು ವಿದ್ಯುತ್ ದರವನ್ನು ಸರಾಸರಿ 5.4 ರಂತೆ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದ ಕಾರಣ ಸರ್ಕಾರ ಎಚ್ಚೆತ್ತುಕೊಂಡು ವಿದ್ಯುತ್ ದರ  ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು  ಆಗ್ರಹಿಸಿದರು.

ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು. ಈ ಸಂದರ್ಭದಲ್ಲಿ  ಉದ್ಯಮಿ ರಾಜೇಂದ್ರ ಪಾಟೀಲ್, ಜಯಶ್ರೀ ಮಾಳಗಿ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ