Breaking News

‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ  ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ:ಸತೀಶ್ ಜಾರಕಿಹೊಳಿ

Spread the love

ಹುಕ್ಕೇರಿ : ‘ ಝೀ ವಾಹಿನಿಯಲ್ಲಿ  ಪ್ರಸಾರವಾಗುತ್ತಿರುವ ‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ  ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಅರ್ಜುನ ವಾಡ್ ಗ್ರಾಮದಲ್ಲಿ ಗುರುವಾರ ಮಹಾನಾಯಕ ಬ್ಯಾನರ್ ಉದ್ಘಾಟನೆಗೊಳಿಸಿ ಮಾತನಾಡಿದರು.

‘ ಇಡೀ ಕರ್ನಾಟಕದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರವಿರುವ ಪೊಸ್ಟರ್ ಉದ್ಘಾಟನೆಗೊಳಿಸುವ ಪರಂಪರೆ ಮುಂದುವರೆದಿದೆ. ಇದಕ್ಕೆ ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ಕಾರಣ. ಇದರಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಭಿಮಾನಿಗಳು ಈ ಒಂದು ಕಾರ್ಯವನ್ನು ಮಾಡುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ’ ಎಂದರು.

‘ ಕಳೆದ 10 ವರ್ಷಗಳ ಹಿಂದೆ ಅರ್ಜುನ ವಾಡ್ ಗ್ರಾಮದಲ್ಲಿ  ಈ ರೀತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇಂದು ಕಾರ್ಯಕ್ರಮ ನಡೆಯುತ್ತಿದೆ. ಇದು ಕೇವಲ ಪೋಸ್ಟರ್ ಗೆ ಮಾತ್ರ ಸಿಮಿತವಾಗಬಾರದು. ಡಾ.ಬಿ.ಆರ್. ಅಂಬೇಡ್ಕರ್ ಅವರ ಹೋರಾಟ, ನಮಗೊಸ್ಕರ ಪಟ್ಟ ನೋವು  ದಿನಪ್ರತಿ ನೆನಪಿಗೆ ಬರಬೇಕು’ ಎಂದು ಕಿವಿ ಮಾತು ಹೇಳಿದರು.

‘ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳು, ತತ್ವಾದರ್ಶಗಳನ್ನು ನಿಮ್ಮ ಜೀವನದಲ್ಲಿಯೂ ಸಹ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಕಾರ್ಯಕ್ರಮ ಮಾಡಿರುವುದಕ್ಕೂ ಸಾರ್ಥಕವಾಗಲಿದೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಳವಿಯ ಚನ್ನಬಸವ ದೇವರು, ಸುರೇಶ ಹುದ್ದಾರ್, ಬಸವರಾಜ ಕೋಳಿ,ಇಲಾಯಿ ಇನಾಮ್ದಾರ್, ಪಪ್ಪುಗೌಡ ಪಾಟೀಲ, ಸುರೇಶ ತಳವಾರ, ರಮೇಶ ಹುಂಜಿ,ಎಂ.ಎಸ್.ಕುಂದಿ, ಕಿರಣ ರಜಪೂತ, ಪ್ರಕಾಶ ಬಸಾಪುರಿ ಸೇರಿದಂತೆ  ಇತರರ ಇದ್ದರು.


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ