ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಮಹದೇವ ಪ್ರಕಾಶ್ ಅವರು ಮಾಧ್ಯಮ ಸಲಹೆಗಾರರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.ಮೂಲಗಳ ಪ್ರಕಾರ ಇತ್ತೀಚಿಗೆ ಮಹಾದೇವ ಪ್ರಕಾಶ್ ಕಾರ್ಯವೈಖರಿಗೆ, ಯಡಿಯೂರಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು. ನೀವು ಈ ರೀತಿ ಕಾರ್ಯನಿರ್ವಾಹಿಸುವುದಾದರೆ,ರಾಜೀನಾಮೆ ನೀಡುವುದು ಸೂಕ್ತ ಎಂದು ಹೇಳಿದ್ದರು ಎಂದು ಮೂಲಗಳು ಖಚಿತಪಡಿಸಿವೆ. ಈ ಎಲ್ಲಾ ಬೆಳವಣಿಗೆಗಳ ಪರಿಣಾಮವೇ ಮಹಾದೇವ ಪ್ರಕಾಶ್ ರಾಜೀನಾಮೆ ಸಲ್ಲಿಸಿದ್ದಾರೆ.
Laxmi News 24×7