ಕಲಬುರಗಿ: ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಸೂರು ನಾಯಕ ತಾಂಡಾದಲ್ಲಿ ನಡೆದಿದೆ.
ಮೃತ ಯುವತಿಯನ್ನು ಕಾವೇರಿ ಪವಾರ್(23) ಎಂದು ಗುರುತಿಸಲಾಗಿದೆ. ಪ್ರಿಯಕರ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮನನೊಂದು ಕಾವೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.
ಕಾವೇರಿ ಮತ್ತು ಸಲಗರ ಕಾಲೋನಿ ಯುವಕ ಮಾನಸಿಂಗ್ ರಾಠೋಡ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತನ್ನನ್ನು ಮದುವೆಯಾಗು ಎಂದಿದ್ದಕ್ಕೆ ಮಾನಸಿಂಗ್ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಯುವತಿ ಪೋಷಕರು ದೂರಿದ್ದಾರೆ.
ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7