ನವದೆಹಲಿ: ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಸಿಬಿಐ ಯಾವುದೇ ರಾಜ್ಯದಲ್ಲಿ ತನಿಖೆ ನಡೆಸಲು ಸಾಧ್ಯವಿಲ್ಲ. ಯಾವುದೇ ರಾಜ್ಯದಲ್ಲಾಗಲಿ ಸಿಬಿಐ ತನಿಖೆಗೆ ಮುನ್ನ ಆಯಾ ರಾಜ್ಯದ ಒಪ್ಪಿಗೆ ಪಡೆದಿರಬೇಕು. ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ದರೆ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಅಲಹಾಬಾದ್‍ನ ಫರ್ಟಿಕೋ ಮಾರ್ಕೆಟಿಂಗ್ ಕಂಪೆನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಿಂದ ಈ ಮಹತ್ವದ ತೀರ್ಪು ಹೊರಬಿದ್ದಿದೆ. ರಾಜ್ಯ ಸರ್ಕಾರದ ಅನುಮತಿ ಇಲ್ಲದೇ ಸಿಬಿಐ ರೇಡ್ ಮಾಡಿದ್ದನ್ನು ಪ್ರಶ್ನಿಸಲಾಗಿತ್ತು.
ಸಿಬಿಐ ಕ್ರಮ ಸರಿಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿರುವ ಸುಪ್ರೀಂಕೋರ್ಟ್ ಯಾವುದೇ ಪ್ರಕರಣಗಳಲ್ಲಿ ಅಯಾ ರಾಜ್ಯ ಸರ್ಕಾರದ ಅನುಮತಿ ಇಲ್ಲದೇ ಸಿಬಿಐ ತನಿಖೆಗೆ ವಹಿಸುವಂತಿಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.
ಇನ್ನು ಕೇಂದ್ರಾಡಳಿತ ಪ್ರದೇಶವನ್ನು ಮೋರಿ, ಕೇಂದ್ರ ಸರ್ಕಾರ ರಾಜ್ಯದ ಮೇಲೆ ಸಿಬಿಐ ಅಧಿಕಾರ ಹಾಗೂ ನ್ಯಾಯವ್ಯಾಪ್ತಿಯನ್ನು ವಿಸ್ತರಿಸಿದರೆ, ಅದಕ್ಕೆ ರಾಜ್ಯದ ಒಪ್ಪಿಗೆ ಇಲ್ಲದಿದ್ದರೆ ಆ ನಿರ್ಣಯವನ್ನು ಅನುಮತಿಸುವುದಿಲ್ಲ ಎಂದು ಕೂಡ ಹೇಳಿದೆ.