ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ನಡೆಯಲಿದೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದಿದ್ದಾರೆ.
ಈಗಾಗಲೇ ಹಲವು ಉದ್ಯೋಗಗಳಿಗೆ ನೇಮಕಾತಿ ನಡೆಯುತ್ತಿದೆ. ಇನ್ನೂ ಹೆಚ್ಚಿನ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.