Breaking News

ಬಿಜೆಪಿ ಸರ್ಕಾರ ಬಂದಾಗಲೆಲ್ಲ ಅಶಕ್ತರೇ ಮಂತ್ರಿಯಾಗಿದ್ದಾರೆ: ಅಪ್ಪಚ್ಚು ರಂಜನ್

Spread the love

ಮಡಿಕೇರಿ: ನಮ್ಮ ಸರ್ಕಾರ ರಚನೆಯಾದಗಲೆಲ್ಲ ಅವರೇ ಮಂತ್ರಿಗಳಾಗಿದ್ದಾರೆ. ಜೊತೆಗೆ ಕೆಲಸ ಮಾಡದ ಅಶಕ್ತ ಸಚಿವರು ಇದ್ದಾರೆ. ಅಂತಹವರನ್ನು ಕೈಬಿಟ್ಟು ನಮಗೆ ಸಚಿವ ಸ್ಥಾನ ಕೊಡಲಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅವರು, ನಾಲ್ಕೈದು ಬಾರಿ ಸಚಿವರಾದವರೇ ಮತ್ತೆ ಸಚಿವರಾಗಿದ್ದಾರೆ.

ಈಗಿರುವ ಕ್ಯಾಬಿನೆಟ್ ನಲ್ಲಿ ಸರಿಯಾಗಿ ಕರ್ತವ್ಯ ನಿರ್ವಹಿಸದ ಸಚಿವರೂ ಇದ್ದಾರೆ. ಅಂತಹವರನ್ನು ಕೈಬಿಡಲಿ. ಉಮೇಶ್ ಕತ್ತಿ ಸೇರಿದಂತೆ ನಾನೂ ಐದು ಬಾರಿ ಶಾಸಕನಾಗಿದ್ದೇನೆ. ನಮಗೂ ಸಚಿವ ಸ್ಥಾನ ನೀಡಲಿ. ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ನೀಡಬೇಕೆಂಬುದು ನಮ್ಮೆಲ್ಲರ ಆಗ್ರಹ. ಪಕ್ಷವೂ ಕೂಡ ಹಿರಿಯ ಶಾಸಕರಿಗೆ ಮತ್ತು ಮೂಲ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದರು.ಹೈಕಮಾಂಡ್ ಕೂಡ ಇದೇ ಅಭಿಪ್ರಾಯ ಹೊಂದಿರುವುದರಿಂದ ಸಚಿವಸ್ಥಾನ ಸಿಗುತ್ತದೆ ಎಂಬ ನಂಬಿಕೆ ಇದೆ. ರಾಜ್ಯ ಮುಖಂಡರು ಸಚಿವಸ್ಥಾನಕ್ಕೆ ಮಾಡುವ ಪಟ್ಟಿಯನ್ನು ಹೈಕಮಾಂಡ್ ಪರಿಗಣಿಸುವುದಿಲ್ಲ. ಈಗಾಗಲೇ ಹಲವು ಚುನಾವಣೆಗಳಲ್ಲಿ ಟಿಕೆಟ್ ನೀಡಿರುವುದನ್ನು ನೀವು ಗಮನಿಸಿದರೆ ಅದೆಲ್ಲವೂ ಗೊತ್ತಾಗುತ್ತದೆ. ಹೀಗಾಗಿ ಹೈಕಮಾಂಡ್ ಮೂಲ ಬಿಜೆಪಿ ಶಾಸಕರನ್ನು ಕೈಬಿಡದೆ ಪರಿಗಣಿಸುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ