Breaking News

ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ

Spread the love

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಧಾರವಾಡ ಉಪನಗರ ಠಾಣೆಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ್ದ ವಿಜಯ್ ಕುಲಕರ್ಣಿ, ಸಂಜೆ 7 ಗಂಟೆಗೆ ವಿಚಾರಣೆ ಎದುರಿಸಿ ಠಾಣೆಯಿಂದ ಹೊರ ಬಂದರು. ಈ ವೇಳೆ ಮಾಧ್ಯಮದವರು ಪ್ರಶ್ನೆ ಕೇಳಲು ಮುಂದಾದಾಗ ಕೊಲೆ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಹೇಳಿ ನಡೆದರು.ಇಂದು ಕೇವಲ ವಿಜಯ್ ಕುಲಕರ್ಣಿಗೆ ಮಾತ್ರವಲ್ಲ ವಿನಯ್ ಕುಲಕರ್ಣಿ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡ, ಕಾಂಗ್ರೆಸ್ ಮುಖಂಡ ಹನುಂಮತ ಕೊರವರ, ವಿಜಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಹಾಗೂ ಯೋಗಿಶಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿಯನ್ನು ಸಹ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆಸಿದ್ದರು. ಸಂಜೆವರೆಗೆ ಎಲ್ಲರನ್ನು ವಿಚಾರಣೆ ನಡೆಸಿ ಮರಳಿ ಕಳುಹಿಸಿದ್ದಾರೆ. ನಾಳೆ ಮತ್ತೆ ಕೆಲವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆಸುವ ಸಾದ್ಯತೆ ಇದೆ.

https://youtu.be/e430w1sQT6E

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ